ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರಕಟ
Tuesday, March 11, 2025
ಲೋಕಬಂಧು ನ್ಯೂಸ್
ಉಡುಪಿ: ಯುವವಾಹಿನಿ ಉಡುಪಿ ಘಟಕ ನೀಡುವ ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಇತಿಹಾಸ ಪ್ರಾಧ್ಯಾಪಕ ಡಾ.ತುಕಾರಾಮ ಪೂಜಾರಿ ಹಾಗೂ ಜಾನಪದ ಕಲಾವಿದ ಪ್ರಶಸ್ತಿ ದೈವಾರಾಧನೆ ಸೇವಾ ವರ್ಗದ ಅಲೆವೂರು ಗೋಪು ಮಡಿವಾಳ ಅವರಿಗೆ ನೀಡಲಾಗುವುದು. ಪ್ರಶಸ್ತಿ 12 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ ಎಂದು ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ತಿಳಿಸಿದರು.ಸೋಮವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಾರ್ಚ್ 15ರಂದು ಅಪರಾಹ್ನ 4.30ಕ್ಕೆ ಚಿಟ್ಪಾಡಿ ಲಕ್ಷ್ಮೀ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ತುಳುಕೂಟ ಉಡುಪಿ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡುವರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಉದ್ಯಮಿ ರಂಜನ್ ಕೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾಂಸ ಬನ್ನಂಜೆ ಬಾಬು ಆಮೀನ್ ಉಪಸ್ಥಿತರಿರುವರು ಎಂದರು.