
ಬಂದ್'ಗೆ ಬಸ್ ಮಾಲಕರ ಬೆಂಬಲ ಇಲ್ಲ
Friday, March 21, 2025
ಲೋಕಬಂಧು ನ್ಯೂಸ್
ಉಡುಪಿ: ಮಾರ್ಚ್ 22ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್'ಗೆ ಬಸ್ ಮಾಲಕರ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಕೆಲವು ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್'ಗೆ ಕರೆ ನೀಡಿವೆ.
ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಬಸ್ ಸಂಚಾರ ಇರಲಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಕನ್ನಡಕ್ಕೆ ಅನ್ಯಾಯವಾದಾಗ ಖಾಸಗಿ ಬಸ್ ಮಾಲಕರು ಜೊತೆಗಿರುತ್ತೇವೆ. ಆದರೆ, ಸಾರ್ವಜನಿಕರಿಗೆ ತೊಂದರೆ ಆಗುವುದರಿಂದ ಯಾವುದೇ ಖಾಸಗಿ ಬಸ್'ಗಳ ಬಂದ್ ಇರುವುದಿಲ್ಲ. ಎಲ್ಲ ಬಸ್'ಗಳು ಎಂದಿನಂತೆ ಓಡಾಡಲಿವೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯುತ್ತಿದ್ದು ಬಸ್ ಬಂದ್ ಮಾಡಿದರೆ ಮಕ್ಕಳಿಗೂ ತೊಂದರೆ ಆಗುತ್ತದೆ. ಅಲ್ಲದೆ, ಆಸ್ಪತ್ರೆಗೆ ಹೋಗುವವರಿಗೆ, ದೂರದ ಊರುಗಳಿಗೆ ಹೋಗುವವರಿಗೆ ಸಮಸ್ಯೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬಂದ್ ಗೆ ನೈತಿಕ ಬೆಂಬಲ ಕೊಟ್ಟಿದ್ದೇವೆ. ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಕುಯಿಲಾಡಿ ತಿಳಿಸಿದರು.