ಸಂಭ್ರಮದ ಅನಂತೇಶ್ವರ ರಥೋತ್ಸವ ಸಂಪನ್ನ
Sunday, March 2, 2025
ಲೋಕಬಂಧು ನ್ಯೂಸ್
ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಭಾನುವಾರ ಸಂಭ್ರಮದಿಂದ ನಡೆಯಿತು.ಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಭಂಡಾರಕೇರಿ ಮಠಾಧೀಶ ಶ್ರೀ ವಿಧ್ಯೇಶತೀರ್ಥ ಶ್ರೀಪಾದರು ರಥೋತ್ಸವದಲ್ಲಿ ಭಾಗವಹಿಸಿದ್ದರು.