ಹಣಕಾಸು ಲಭ್ಯತೆ ನೋಡಿ ಬಿಲ್ ಪಾವತಿ
Tuesday, March 4, 2025
ಲೋಕಬಂಧು ನ್ಯೂಸ್
ಬೆಂಗಳೂರು: ಏಪ್ರಿಲ್ ತಿಂಗಳಿನಲ್ಲಿ ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸೋಮವಾರ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಾಕಿಯಿರುವ ಬಿಲ್ ಪಾವತಿಗೆ ಮನವಿ ಮಾಡಿದ್ದಾರೆ. ಸರ್ಕಾರದಲ್ಲಿ ಲಭ್ಯವಿರುವ ಹಣಕಾಸನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು.
ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಸಿಎಂ ಪ್ರಶ್ನಿಸಿದ್ದಾರೆ.