-->
ಎಲ್ಲ ಸಮಸ್ಯೆಗಳಿಗೂ ಸಂವಿಧಾನವೇ ಪರಿಹಾರ

ಎಲ್ಲ ಸಮಸ್ಯೆಗಳಿಗೂ ಸಂವಿಧಾನವೇ ಪರಿಹಾರ

ಲೋಕಬಂಧು ನ್ಯೂಸ್
ಉಡುಪಿ: ದೇಶದ ಎಲ್ಲಾ ಸಮಸ್ಯೆ, ಸವಾಲುಗಳಿಗೆ ಸಂವಿಧಾನವೊಂದೇ ಪರಿಹಾರ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಬೇಕು ಮತ್ತು ಅರ್ಥೈಸಿಕೊಳ್ಳಬೇಕು. ಜೊತೆಗೆ ಸಂವಿಧಾನ ಬದ್ಧವಾಗಿ ಜೀವಿಸುವುದು ಇಂದಿನ ತುರ್ತು ಎಂದು ನಿವೃತ್ತ ನ್ಯಾಯಾಧೀಶ ನ್ಯಾ| ಎಚ್.ಎನ್. ನಾಗಮೋಹನದಾಸ್ ಹೇಳಿದರು.ನಗರದ ಎಲ್ಐಸಿ ಎಂಪ್ಲಾಯೀಸ್ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಆರಂಭಗೊಂಡ ಉಡುಪಿ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರದಲ್ಲಿ ಮಾತನಾಡಿದರು.


ನಾವು ಮೊದಲು ನಮ್ಮಲ್ಲಿರುವ ದೋಷಗಳನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಸಂವಿಧಾನ ಸರಿ ಇಲ್ಲ, ಅದು ಅಪ್ರಸ್ತುತ, ಅದನ್ನು ಬದಲಿಸುತ್ತೇವೆ ಎಂದು ಹೇಳುವುದು ಸರಿಯಲ್ಲ ಎಂದರು.


ಸಾಹಿತಿ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡಕ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾರಾಯಣಸ್ವಾಮಿ ಎಂ., ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್, ಪ್ರಾಧ್ಯಾಪಕಿ ಡಾ.ನಿಕೇತತ, ವಿಮಾ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ ಬಿ. ಕುಂದರ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article