ಮಹಾವೀರ ಕಾಲೇಜಿಗೆ ಕೊಡುಗೆ
Monday, March 31, 2025
ಲೋಕಬಂಧು ನ್ಯೂಸ್
ಉಡುಪಿ: ಶೈಕ್ಷಣಿಕ ಮೂಲ ಸೌಕರ್ಯ ಬಲಪಡಿಸುವ ಉದ್ದೇಶದಿಂದ ಅದಾನಿ ಸಮೂಹದ ಸಾಮಾಜಿಕ ಜವಾಬ್ದಾರಿ ಹೊಣೆಗಾರಿಕೆ (ಸಿಎಸ್ಆರ್) ನಿರ್ವಹಿಸುವ ಅದಾನಿ ಫೌಂಡೇಶನ್ ವತಿಯಿಂದ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿಗೆ 25 ಲಕ್ಷ ಅನುದಾನ ನೀಡಲಾಯಿತು.ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅನುದಾನದ ಚೆಕ್ ನ್ನು ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಅವರಿಗೆ ಹಸ್ತಾಂತರಿಸಿದರು. ಮಾಜಿ ಸಚಿವ ಹಾಗೂ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಆಳ್ವ, ಶಿಕ್ಷಣದ ಉನ್ನತೀಕರಣ ಅದಾನಿ ಫೌಂಡೇಶನ್‌ನ ಪ್ರಮುಖ ಆದ್ಯತೆಯಾಗಿದೆ.
ಮಹಾವೀರ ಕಾಲೇಜು ದಶಕಗಳಿಂದ ಜ್ಞಾನ ಮತ್ತು ಮೌಲ್ಯಗಳ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಈ ಅನುದಾನದ ಮೂಲಕ ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.