-->
ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್

ಲೋಕಬಂಧು ನ್ಯೂಸ್
ಉಡುಪಿ: ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸ್ ಇಲಾಖೆ, ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಎಫ್‌ಐ.ಆರ್ ದಾಖಲಿಸಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳಾ ಮೀನುಗಾರರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಕಾಂಗ್ರೆಸ್ ಸರಕಾರದ ನಿರ್ದೇಶನದಂತೆ ಕೇಸು ದಾಖಲಿಸಿದ ಪೋಲೀಸ್ ಇಲಾಖೆಯ ಲೋಪವನ್ನು ಪ್ರಶ್ನಿಸಿದ ಮಾಜಿ ಸಚಿವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಮೂಲಕ ಮೀನುಗಾರರ ಪರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ.


ಕರಾವಳಿ ಜಿಲ್ಲೆಯ ಮೀನುಗಾರರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸುತ್ತಿರುವುದು ತೀರಾ ಖಂಡನಾರ್ಹ. ಪದೇ ಪದೇ ಮೀನುಗಾರರ ತಾಳ್ಮೆ ಪರೀಕ್ಷೆಗೆ ಮುಂದಾಗುತ್ತಿದ್ದು ಜಿಲ್ಲೆಯ ಪ್ರಜ್ಞಾವಂತ ಜನತೆ ಈ ಬಗ್ಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯಶಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article