.jpg)
ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ದಂಪತಿ ಕಾಪು ಹೊಸಮಾರಿಗುಡಿಗೆ ಭೇಟಿ
Friday, March 21, 2025
ಲೋಕಬಂಧು ನ್ಯೂಸ್
ಕಾಪು: ಅಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ, ವ್ಯೆಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ದಂಪತಿ, ಪುತ್ರ ಮತ್ತು ಸಹೋದರ ವಿಶ್ವನಾಥ್ ಭಟ್ ದಂಪತಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಳದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಅವರು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿದರು.
ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಜಿರ್ಣೋದ್ಧಾರ ನಡೆದು ಬಂದ ಹಾದಿ ಮತ್ತು ಮುಂದಿನ ಕಾರ್ಯ ಯೋಜನೆ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನ ಸಮಿತಿ ಸದಸ್ಯ ಶೇಖರ್ ಸಾಲ್ಯಾನ್, ಮನೋಹರ ರಾವ್ ಕಲ್ಯಾ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮೊದಲಾದವರಿದ್ದರು.