ಕಾಪು ಹೊಸ ಮಾರಿಗುಡಿಗೆ ನ್ಯಾ.ಹೆಗ್ಡೆ ಭೇಟಿ
Friday, March 21, 2025
ಲೋಕಬಂಧು ನ್ಯೂಸ್
ಕಾಪು: ಸಮಗ್ರ ಜೀರ್ಣೋದ್ಧಾರಗೊಂಡು ಕುಂಭಾಭಿಷೇಕ ನಡೆದಿರುವ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಂಗಳವಾರ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಭೇಟಿ ನೀಡಿದರು.ದೇವಳದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.
ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ಶೇಖರ್ ಸಾಲ್ಯಾನ್, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಪ್ರಚಾರ ಸಮಿತಿ ಸಂಚಾಲಕ ರಘುರಾಮ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ ಸೇರಿಗಾರ್ ಮೊದಲಾದವರಿದ್ದರು.