.jpg)
ಬಿಜೆಪಿಯವರು ಗ್ಯಾರಂಟಿ ನಿರಾಕರಿಸಲಿ
Monday, March 3, 2025
ಲೋಕಬಂಧು ನ್ಯೂಸ್
ಕಾರ್ಕಳ: ಬಿಜೆಪಿಯವರು ಗೃಹಲಕ್ಷ್ಮೀ, ಗೃಹಜ್ಯೋತಿ ಮೊದಲಾದ ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಿ ಬದ್ಧತೆ ತೋರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲೆಸೆದರು.
ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ, ಡಾ.ಎಂ.ವೀರಪ್ಪ ಮೊಯ್ಲಿ ಅಭಿನಂದನೆ, ಕಾಂಗ್ರೆಸ್ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಶಾಸಕ ಸುನಿಲ್ ಕುಮಾರ್ ತನಗೆ ಸ್ವಾಗತ ಕೋರಿ ಮಾಡಿರುವ ಟ್ವಿಟ್‌ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿ, ಮೊದಲು ಸುನಿಲ್ ಕುಮಾರ್ ಬಿಜೆಪಿಯಲ್ಲಿನ ಗೊಂದಲಗಳನ್ನು ಸರಿಪಡಿಸಲಿ. ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಲು ಏಕೆ ಮುಂದಾದರು ಎಂಬುದನ್ನು ಕ್ಷೇತ್ರದ ಜನತೆಗೆ ತಿಳಿಸಲಿ ಎಂದರು.
ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಅವರನ್ನು ಸನ್ಮಾನಿಸಲಾಯಿತು.
ಎಸ್.ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಂಸದರಾದ ವಿನಯ ಕುಮಾರ್ ಸೊರಕೆ ಮತ್ತು ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ರಮಾನಾಥ ರೈ, ವಿಧಾನ ಪರಿಷತ್ ಸದಸಯ ಐವನ್ ಡಿ'ಸೋಜ, ಮಂಜುನಾಥ ಪೂಜಾರಿ ಮುದ್ರಾಡಿ, ಎಂ.ಎ.ಗಫೂರ್, ಮಿಥುನ್ ರೈ, ರಾಜು ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ಶುಭದ ರಾವ್, ಗೋಪಿನಾಥ್ ಭಟ್, ಅಶೋಕ್ ಕೊಡವೂರು, ಸಾಹಿಲ್ ರೈ ಮೊದಲಾದವರಿದ್ದರು.