
ಮಣಿಪಾಲ್ ಹೈಸ್ಕೂಲ್ ಟ್ರಸ್ಟ್: ರಾಮಚಂದ್ರ ನೆಲ್ಲಿಕಾರು ನೂತನ ಪಿ.ಆರ್.ಒ
Thursday, March 6, 2025
ಲೋಕಬಂಧು ನ್ಯೂಸ್
ಉಡುಪಿ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಭಾಗಿತ್ವದ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಅವರು, ಕಳೆದ 12 ವರ್ಷದಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುುಭವಿ.
ಉತ್ತಮ ವಾಗ್ಮಿಯಾಗಿರುವ ಅವರು, 2 ಸಾವಿರಕ್ಕೂ ಅಧಿಕ ಸಾರ್ವಜನಿಕ ಸಭೆ, ಸಮಾರಂಭಗಳ ಭಾಷಣಕಾರರಾಗಿ, ರಾಜ್ಯ ಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ ಸಂಪನ್ಮೂಲ ವ್ಯಕಿಯಾಗಿ ಹಾಗೂ 300ಕ್ಕೂ ಅಧಿಕ ಎನ್.ಎಸ್.ಎಸ್. ಶಿಬಿರದ ಉಪನ್ಯಾಸಕರಾಗಿಯೂ ಜನಪ್ರಿಯರಾಗಿದ್ದಾರೆ.
ವಿದ್ಯಾರ್ಥಿ ದೆಸೆಯಲ್ಲಿಯೇ ಮೂಡುಬಿದಿರೆ ದವಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಕಾರ್ಕಳ- ನಾರಾವಿ ದೇವಾಡಿಗ ಸಂಘದ ಕಾರ್ಯದರ್ಶಿಯಾಗಿ, ಕಾರ್ಕಳ ಜೆ.ಸಿ.ಐ ಉಪಾಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ರಂಗಭೂಮಿ ಕಲಾವಿದರಾಗಿ 300ಕ್ಕೂ ಅಧಿಕ ನಾಟಕಗಳಲ್ಲಿ ಕಲಾವಿದರಾಗಿ, 8 ತುಳು ನಾಟಕಗಳನ್ನು ಬರೆದು ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವಿದ್ಯಾನಗರದ ಮಣಿಪಾಲ್ ಪದವಿ ಪೂರ್ವ ಕಾಲೇಜಿನಲ್ಲಿ ಕೆಲಸದ ದಿನಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಶಿಕ್ಷಣಾರ್ಥಿಗಳ ಭೇಟಿಗೆ ಲಭ್ಯರಿರುತ್ತಾರೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.