ನಮ್ಮ ಕ್ಲಿನಿಕ್ ಮೂಲಕ ಗುಣಮಟ್ಟದ ಆರೋಗ್ಯ ಸೇವೆ
Tuesday, March 11, 2025
ಲೋಕಬಂಧು ನ್ಯೂಸ್
ಉಡುಪಿ: ಕೇಂದ್ರ ಸರ್ಕಾರ ನಗರಸಭೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಬೇಡಿಕೆಗೆ ಅನುಗುಣವಾಗಿ ಆರಂಭಿಸಿರುವ 'ನಮ್ಮ ಕ್ಲಿನಿಕ್' ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.ಕೊಡವೂರು ವಾರ್ಡ್ ಲಕ್ಷ್ಮೀನಗರ ಗರ್ಡೆಯಲ್ಲಿ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಚಿಕಿತ್ಸಾಲಯವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಅಶೋಕ್, ನಗರಸಭಾ ಸದಸ್ಯ ವಿಜಯ ಕೊಡವೂರು, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್ ಮೊದಲಾದವರಿದ್ದರು.