ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ:ಅಣುಕು ಶವಯಾತ್ರೆ ನಡೆಸಿ ಪ್ರತಿಭಟನೆ
Friday, March 7, 2025
ಲೋಕಬಂಧು ನ್ಯೂಸ್
ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜನತೆ ಪ್ರತಿದಿನ ಸಮಸ್ಯೆ ಅನುಭವಿಸುವಂತಾಗಿದೆ. ಅದನ್ನು ಖಂಡಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಶುಕ್ರವಾರ ಅಣುಕು ಶವಯಾತ್ರೆ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿತು.ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು, 'ಜೀವಂತ ಶವ'ವಾಗಿದ್ದರು. ಆ ಮೂಲಕ ಕೇಂದ್ರ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂದ್ರಾಳಿ ಇಂಗ್ಲೀಷ್ ಮೀಡಿಯಂ ಶಾಲೆಯ ಮುಂಭಾಗದಿಂದ ಆರಂಭಗೊಂಡ ಪ್ರತಿಭಟನೆ ಇಂದ್ರಾಳಿ ರುದ್ರಭೂಮಿ ವರೆಗೆ ನಡೆಯಿತು.
ಜ.15ರಂದು ರೈಲ್ವೆ ಬ್ರಿಡ್ಜ್ ಪೂರ್ಣಗೊಳ್ಳುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಭರವಸೆ ಕೊಟ್ಟಿದ್ದರು. ಎರಡೂ ಭಾಗದಲ್ಲಿ ರಸ್ತೆ ನಿರ್ಮಾಣವಾಗಿ ಏಳು ವರ್ಷ ಕಳೆದರೂ ರೈಲ್ವೆ ಸೇತುವೆ ಪೂರ್ಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾಮಾಜಿಕ ಕಾರ್ಯಕರ್ತರಾದ ವಿನಯಚಂದ್ರ, ಗಣೇಶರಾಜ್ ಸರಳೇಬೆಟ್ಟು ಮೊದಲಾದವರಿದ್ದರು.