ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ. ಸಾಮಗ ಆಯ್ಕೆ
Saturday, March 29, 2025
ಲೋಕಬಂಧು ನ್ಯೂಸ್
ಉಡುಪಿ: ಮೇ ತಿಂಗಳಲ್ಲಿ ನಡೆಯುವ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಪ್ರಾಚಾರ್ಯ, ಯಕ್ಷಗಾನ ಕಲಾವಿದ, ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ ಆಯ್ಕೆಯಾಗಿದ್ದಾರೆ.ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಸಮ್ಮೇಳನ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕಸಾಪ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜನಿ ವಸಂತ್ ತಿಳಿಸಿದ್ದಾರೆ.