ಮಹಿಳೆ ಸಮಾಜ ಬದಲಾವಣೆಯ ಶಿಲ್ಪಿ
Wednesday, March 12, 2025
ಲೋಕಬಂಧು ನ್ಯೂಸ್
ಉಡುಪಿ: ಮಹಿಳೆ ಸಮಾಜ ಬದಲಾವಣೆಯ ಶಿಲ್ಪಿ. ಆದರೆ, ಪುರುಷ ಮತ್ತು ಮಹಿಳೆ ಸಮಾನ ಕೊಡುಗೆ ನೀಡಿದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.ಇಲ್ಲಿನ ನೇತ್ರಜ್ಯೋತಿ ಪ್ಯಾರಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಮಂಗಳವಾರ ನಡೆದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಅತಿಥಿಯಾಗಿದ್ದ ಹಿರಿಯ ವಕೀಲೆ ಮೇರಿ ಶ್ರೇಷ್ಠ, ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯ ಜವಾಬ್ದಾರಿಗಳ ಬಗ್ಗೆ ಮಾತನಾಡಿದರು.
ಕಾಲೇಜು ಸಂಸ್ಥಾಪಕ ಅಧ್ಯಕ್ಷ ನಾಡೋಜ ಡಾ.ಕೃಷ್ಣಪ್ರಸಾದ್ ಕೂಡ್ಲು ಮಹಿಳೆಯರ ತ್ಯಾಗ ಹಾಗೂ ಪುರುಷನ ಏಳಿಗೆಯಲ್ಲಿ ಮಹಿಳೆಯ ಪಾತ್ರ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು.
ಕಾಲೇಜಿನ ಸಿ.ಓ.ಓ ಡಾ.ಗೌರಿ ಪ್ರಭು, ಎಚ್.ಆರ್ ತಾರಾ ಶಶಿಧರ್ ಇದ್ದರು.
ವಿದ್ಯಾರ್ಥಿಗಳಾದ ದೇವರಾಜ್ ಸ್ವಾಗತಿಸಿ, ಪವನ್ ಕುಮಾರ್ ವಂದಿಸಿದರು. ಕಾಲೇಜಿನ ಸಂಚಾಲಕ ಮಾಧವ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ರಶ್ಮಿ ಕೃಷ್ಣಪ್ರಸಾದ್ ಅವರನ್ನು ಗೌರವಿಸಲಾಯಿತು.