
ರಾಜ್ಯ ರೆಡ್ ಕ್ರಾಸ್ ಸಭಾಪತಿಯಾಗಿ ಬಸ್ರೂರು ರಾಜೀವ ಶೆಟ್ಟಿ ಆಯ್ಕೆ
Thursday, April 10, 2025
ಲೋಕಬಂಧು ನ್ಯೂಸ್
ಉಡುಪಿ: ಉಡುಪಿ ಜಿಲ್ಲಾ ರೆಡ್ ಕ್ರಾಸ್ ಘಟಕದ ಸಭಾಪತಿಯಾಗಿದ್ದ ಬಸ್ರೂರು ರಾಜೀವ್ ಶೆಟ್ಟಿ ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣೆ ನಡೆದಿದ್ದು, ರಾಜ್ಯ ಸರಕಾರದ ಹಣಕಾಸು ಕಾರ್ಯದರ್ಶಿ ಡಾ. ವಿಶಾಲ್ ಆರ್. ಚುನಾವಣಾಧಿಕಾರಿಯಾಗಿದ್ದರು.
ಕೊಪ್ಪಳ ಘಟಕದ ಡಾ. ಶ್ರೀನಿವಾಸ ಹ್ಯಾಟಿ ಉಪಸಭಾಪತಿಯಾಗಿ ಆಯ್ಕೆಯಾದರು.
ರಾಜೀವ್ ಶೆಟ್ಟಿ ಈ ಹಿಂದೆ ಎರಡು ಬಾರಿ ರಾಜ್ಯ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಲಯನ್ಸ್ ಜಿಲ್ಲಾ ಗವರ್ನರ್ ರಾಗಿ, ಕೇಂದ್ರ ಸರಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಒಂಬುಡ್ಸ್ ಮೆನ್ ಆಗಿ ಸೇವೆ ಸಲ್ಲಿಸಿದ್ದಾರೆ. ವಿಭಿನ್ನಚೇತನರ ರಾಷ್ಟ್ರೀಯ ಸಂಘಟನೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.