.jpg)
ಕೃಷ್ಣ ಮಠಕ್ಕೆ ಬಿ.ಎಲ್.ಸಂತೋಷ್ ಭೇಟಿ
Friday, April 11, 2025
ಲೋಕಬಂಧು ನ್ಯೂಸ್
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಶುಕ್ರವಾರ ಕೃಷ್ಣಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ನಂತರ ಗೋಶಾಲೆಗೆ ತೆರಳಿ ಗೋಸೇವೆ ಸಲ್ಲಿಸಿ, ಗೀತಾ ಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರ ಪಡೆದುಕೊಂಡ ಬಿ.ಎಲ್. ಸಂತೋಷ್, ಶ್ರೀಗಳಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಿದರು.
ಬಳಿಕ ಗೀತಾ ಮಂದಿರದಲ್ಲಿ ಭಾರತ್ ಮೇಳ ಅಂಗವಾಗಿ ನಡೆಯುವ ವಿಶೇಷ ವಿಶ್ವರೂಪದ ಪ್ಲಾನಿಟೋರಿಯಂ ಪ್ರದರ್ಶನವನ್ನು ಬಿ.ಎಲ್. ಸಂತೋಷ್ ಉದ್ಘಾಟಿಸಿ, ಶ್ರೀಕೃಷ್ಣ ಮಹಿಮೆಯ ಸಂಕ್ಷಿಪ್ತ ಚಿತ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಶಾಸಕ ಯಶಪಾಲ್ ಸುವರ್ಣ, ಪಕ್ಷ ಪ್ರಮುಖರಾದ ಉದಯಕುಮಾರ್ ಶೆಟ್ಟಿ, ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ ತಂತ್ರಿ ಇದ್ದರು.