
ಶಾಸಕ ಯಶಪಾಲ್ ಅಭಿನಂದನೆ
Thursday, April 10, 2025
ಲೋಕಬಂಧು ನ್ಯೂಸ್
ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 93.90 ಫಲಿತಾಂಶ ಪಡೆದು, ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಅಭಿನಂದನೆಗಳು ಎಂದು ಶಾಸಕ ಯಶಪಾಲ್ ಸುವರ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉಡುಪಿ ಹಾಗೂ ದ.ಕ. ಅನುಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆಯುವ ಮೂಲಕ ಕರಾವಳಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ರಾಜ್ಯ ಮಟ್ಟದಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದ್ದಾರೆ.