ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
Monday, April 14, 2025
ಲೋಕಬಂಧು ನ್ಯೂಸ್
ಉಡುಪಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಎಸ್.ಸಿ. ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕಿರಣ್, ಉಡುಪಿ ನಗರಾಧ್ಯಕ್ಷ ಅಜಿತ್ ಕಪ್ಪೆಟ್ಟು, ಬೈಂದೂರು ಪ್ರಧಾನ ಕಾರ್ಯದರ್ಶಿ ಅಭಿಜಿತ್ ಮುಂತಾದವರಿದ್ದರು.