
ಉತ್ತಮ ಕೇಳುಗ ಒಳ್ಳೆಯ ಮಾತುಗಾರನಾಗಬಲ್ಲ
Wednesday, April 16, 2025
ಲೋಕಬಂಧು ನ್ಯೂಸ್
ಉಡುಪಿ: ಒಬ್ಬ ಉತ್ತಮ ಮಾತುಗಾರನಾಗಬೇಕಾದರೆ ಉತ್ತಮ ಕೇಳುಗನಾಗುವುದು ಅಷ್ಟೇ ಮುಖ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.
ಅಜ್ಜರಕಾಡು ಪ್ರಜಾಪಿತ ಬ್ರಹ್ಮಾಕುಮಾರಿ ವಿಶ್ವವಿದ್ಯಾಲಯದಲ್ಲಿ ನಡೆದ ಮಕ್ಕಳ ಶಿಬಿರದಲ್ಲಿ ಮಾತನಾಡಿದರು.
ನಮ್ಮ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿ ಸಂವಹನ ಕೌಶಲ್ಯ ಅತೀ ಮುಖ್ಯ. ಇಂದು ಉತ್ತಮ ಭಾಷಣಕಾರರಿಗೆ ಸಮಾಜದಲ್ಲಿ ಬೇಡಿಕೆ ಇದೆ. ನಾವೆಲ್ಲರೂ ಸಂವಹನ ಕಲೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುದರೊಂದಿಗೆ ವಿವಿಧ ರೀತಿಯ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಬಿ.ಕೆ ಸುಮಾ ಮತ್ತು ಕೇಂದ್ರದ ಪದಾಧಿಕಾರಿಗಳು ಇದ್ದರು.