-->
ಇಂದ್ರಾಳಿ ಮೇಲ್ಸೇತುವೆ ತ್ವರಿತ ಕಾಮಗಾರಿಗೆ ಸೂಚನೆ

ಇಂದ್ರಾಳಿ ಮೇಲ್ಸೇತುವೆ ತ್ವರಿತ ಕಾಮಗಾರಿಗೆ ಸೂಚನೆ

ಲೋಕಬಂಧು ನ್ಯೂಸ್
ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಅಂತಿಮ ಹಂತದ ಕಾಮಗಾರಿ ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆ ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.ರಾಷ್ಟ್ರ್ರೀಯ ಹೆದ್ದಾರಿ 169ಎ ಉಡುಪಿ ನಗರ ಹಾಗೂ ಮಣಿಪಾಲ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೆ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿ ಪ್ರಗತಿ ವೀಕ್ಷಿಸಿ ಮಾತನಾಡಿದರು.


ರೈಲ್ವೆ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆ ವತಿಯಿಂದ ವೆಲ್ಡಿಂಗ್ ಕಾರ್ಯದ ಗುಣಮಟ್ಟವನ್ನು ಸ್ಥಳೀಯವಾಗಿ ಪರಿಶೀಲನೆ ನಡೆಸಲಾಗಿದೆ. ಅಂತಿಮ ವರದಿಯನ್ನು ರೈಲ್ವೆ ಡಿಸೈನ್ ಮತ್ತು ಸೇಫ್ಟಿ ಆರ್ಗನೈಸೇಷನ್ ಲಕ್ನೊ ಅವರಿಂದ ತ್ವರಿತವಾಗಿ ಕೈಗೊಳ್ಳಬೇಕು. ರೈಲ್ವೆ ಇಲಾಖೆ ನಿಗದಿಪಡಿಸುವ ದಿನಾಂಕದಂದು ರೈಲ್ವೆ ಸಂಚಾರ ಸ್ಥಗಿತಗೊಳಿಸಿ, ಅಳವಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.


ಹರ್ಡಲ್ಸ್ ರೈಲ್ವೇ ಮೇಲ್ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಬೃಹತ್ ಕ್ರೈನ್ ಗಳು, ಜಾಕ್ ಗಳು, ರೋಲರ್ ಗಳು, ರೇಲ್ಸ್ ಗಳು ಮತ್ತಿತರ ಅವಶ್ಯ ಸಾಧನಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ಸುರಕ್ಷಿತ ಕಾಮಗಾರಿ ಕೈಗೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಕೊಂಕಣ ರೈಲ್ವೆ ಸೀನೀಯರ್ ಇಂಜಿನಿಯರ್ ಗೋಪಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಎ.ಇ. ಮಂಜುನಾಥ್, ಗುತ್ತಿಗೆದಾರರು ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article