.jpg)
ಕವಿತೆಗಳಿಗೆ ವಿಮರ್ಶೆ ಬೇಕಿಲ್ಲ
Friday, April 11, 2025
ಲೋಕಬಂಧು ನ್ಯೂಸ್
ಉಡುಪಿ: ಕವನಗಳಿಗೆ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಅವಕಾಶವಿದೆ. ಹಾಗಾಗಿ ಕವಿತೆಗಳಿಗೆ ವಿಮರ್ಶೆಯ ಅವಶ್ಯಕತೆ ಎದುರಾಗುವುದಿಲ್ಲ ಎಂದು ಮಣಿಪಾಲ ಮಾಹೆ ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ನಿರ್ದೇಶಕಿ ಡಾ.ಶುಭ ಎಚ್.ಎಸ್. ಹೇಳಿದರು.ರೇಡಿಯೊ ಮಣಿಪಾಲ್ 90.4 ಸಮುದಾಯ ಬಾನುಲಿ ಕೇಂದ್ರ ಮಣಿಪಾಲ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂಐಸಿ ಕ್ಯಾಂಪಸ್ ನಲ್ಲಿ ಗುರುವಾರ ನಡೆದ ವಿಷುಕಣಿ-ಕವಿದನಿ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ಯುಗಾದಿ ಹಬ್ಬದ ಕುರಿತು ನಮ್ಮಲ್ಲಿರುವ ಸಂಸ್ಕೃತಿ ಆಚಾರಗಳನ್ನು ಕವನಗಳ ಮೂಲಕ ಪ್ರಚುರಪಡಿಸುವ ಈ ಅಪೂರ್ವ ಅವಕಾಶ ಲಭಿಸಿರುವುದು ಸಂತಸದಾಯಕ ಎಂದರು.
ಅಧ್ಯಕ್ಷತೆ ವಹಿಸಿದ್ದ ಭಾಷಾತಜ್ಞ ನಾಡೋಜ ಪ್ರೊ.ಕೆ.ಪಿ. ರಾವ್, ಭಾಷೆಗಳನ್ನು ಉಳಿಸಿ ಬೆಳೆಸಬೇಕು. ಇಲ್ಲವಾದಲ್ಲಿ ಭಾಷೆಯೊಂದಿಗೆ ಅದರ ಅಪೂರ್ವ ಸಂಸ್ಕೃತಿ ಕೂಡಾ ಅವನತಿಯಾಗುವ ಸಂಭವವಿದೆ. ನಮ್ಮ ದೇಶದಲ್ಲಿರುವ ಹಲವಾರು ಭಾಷೆಗಳು ಅವನತಿಯ ಹಾದಿಯಲ್ಲಿರುವುದು ಖೇದಕರ ಎಂದರು.
ಮುಖ್ಯ ಅಭ್ಯಾಗತರಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮ, ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಮತ್ತು ಕಸಾಪ ಉಡುಪಿ ತಾಲೂಕು ಘಟಕ ಇಂಥ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಕಸಾಪ ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ. ಇದ್ದರು. ಕಸಾಪ ಜಿಲ್ಲಾ ಮಾಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಶುಭ ಹಾರೈಸಿದರು. ಕವಿಗೋಷ್ಠಿಯ ಸಮನ್ವಯಕಾರರಾಗಿ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಭಾಗವಹಿಸಿ, ಕವನಗಳು ಹುಟ್ಟುವ ಬಗೆ ಹಾಗೂ ಅವುಗಳನ್ನು ಮತ್ತಷ್ಟು ಆಕರ್ಷಕವಾಗಿ ಬರೆಯುವ ಬಗ್ಗೆ ಮಾಹಿತಿ ನೀಡಿದರು.
ಕವಿಗಳಾದ ಕವಿತಾ ಎಸ್. ಮಣಿಪಾಲ (ಹವ್ಯಗನ್ನಡ), ವೈಷ್ಣವಿ ಸುಧೀಂದ್ರ ರಾವ್ (ಕುಂದಾಪ್ರ ಕನ್ನಡ), ರಾಮಾಂಜಿ ಉಡುಪಿ (ಕನ್ನಡ), ಮಾಲತಿ ರಮೇಶ್ ಭಂಡಾರಿ ಕೆಮ್ಮಣ್ಣು (ತುಳು), ಕೆ. ವಾಣಿಶ್ರೀ ಅಶೋಕ್ ಐತಾಳ್ (ತೆಲುಗು), ಪ್ರಣತಿ ಪಿ. ಭಟ್ ಮಣಿಪಾಲ (ಹಿಂದಿ), ವಿನೋದ ಪಡುಬಿದ್ರಿ (ತುಳು), ವಿಜಯಲಕ್ಷ್ಮೀ ಆರ್. ಕಾಮತ್ (ಕೊಂಕಣಿ), ಮನೋಹರ ಶೆಟ್ಟಿ ಬಿಟ್ಕಲ್ ಕಟ್ಟೆ (ತುಳು), ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ (ಮಲಯಾಳಂ), ವಸುಧಾ ಅಡಿಗ ನೀಲಾವರ (ಕನ್ನಡ), ಲಲಿತ ಪ್ರದೀಪ್ ಭಟ್ (ಕನ್ನಡ) ಮಂಜುನಾಥ ಮರವಂತೆ (ಕುಂದಾಪ್ರ ಕನ್ನಡ), ಸುಲೋಚನ ಪಚ್ಚಿನಡ್ಕ (ತುಳು), ನೀಮಾ ಲೋಬೊ ಶಂಕರಪುರ (ಕೊಂಕಣಿ), ಪುಂಡಲೀಕ ನಾಯಕ್ ಬೈಂದೂರು ಸ್ವರಚಿತ ಕವನ ವಾಚಿಸಿದರು.
ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದ ಕೊಡವೂರು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಿಕೆ ಹಾಗೂ ರೇಡಿಯೊ ಮಣಿಪಾಲ್ ಸಂಯೋಜಕಿ ಡಾ. ರಶ್ಮಿ ಅಮ್ಮೆಂಬಳ ಪ್ರಸ್ತಾವನೆಗೈದರು. ಕಸಾಪ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು. ಸುಲೋಚನಾ ಪಚ್ಚಿನಡ್ಕ ಹಾಗು ವಸುಧಾ ಅಡಿಗ ನೀಲಾವರ ನಿರೂಪಿಸಿದರು