ಭಾರಿ ಗಾಳಿ: ಅಪಾರ ಹಾನಿ
Monday, April 14, 2025
ಲೋಕಬಂಧು ನ್ಯೂಸ್
ಉಡುಪಿ: ಸೋಮವಾರ ಸಂಜೆ ವೇಳೆಗೆ ಬೀಸಿದ ಭಾರೀ ಗಾಳಿಗೆ ಅಪಾರ ಹಾನಿ ಸಂಭವಿಸಿದೆ.ಉಡುಪಿ, ಹಿರಿಯಡ್ಕ, ಬ್ರಹ್ಮಾವರ ಭಾಗದಲ್ಲಿ ಬೀಸಿದ ಗಾಳಿಗೆ ಮನೆ ಮೇಲೆ ಮರ ಉರುಳಿ ಬಿದ್ದಿದೆ. ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು ವಿದ್ಯುತ್ ವ್ಯತ್ಯಯವುಂಟಾಗಿದೆ. ಹಾನಿ ಪ್ರಮಾಣ ಇನ್ನಷ್ಟೆ ಅಂದಾಜಿಸಬೇಕಾಗಿದೆ. ಕೆಲವೆಡೆ ಮಳೆಯಾಗಿದೆ.
ಉಡುಪಿ ನಗರಸಭೆ ವ್ಯಾಪ್ತಿಯ ಮೂಡಬೆಟ್ಟು ವಾರ್ಡಿನಲ್ಲಿ ಇಂದು ಸಂಜೆ ಸುರಿದ ಮಳೆ ಹಾಗೂ ಸುಂಟರಗಾಳಿಯಿಂದ ಭಾರೀ ಗಾತ್ರದ ಮರ 3 ಮನೆಗಳ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾದ ಬಗ್ಗೆ ಮಾಹಿತಿ ತಿಳಿದ ಶಾಸಕ ಯಶಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೀಘ್ರ ಗತಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವಂತೆ ಅಗ್ನಿಶಾಮಕ ದಳ, ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ತಿಳಿಸಿ, ಉಡುಪಿ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಂತ್ರಸ್ತ ಕುಟುಂಬಗಳಿಗೆ ಪ್ರಾಕೃತಿಕ ವಿಕೋಪದಡಿ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸುವಂತೆ ಹಾಗೂ ತಾತ್ಕಾಲಿಕವಾಗಿ ಆಶ್ರಯ ಒದಗಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯ ಶ್ರೀಶ ಭಟ್ ಮೊದಲಾದವರಿದ್ದರು.