
ಯಕ್ಷವಿದ್ಯಾಮಾನ್ಯ ಪ್ರಶಸ್ತಿ ಪ್ರದಾನ
Sunday, April 13, 2025
ಲೋಕಬಂಧು ನ್ಯೂಸ್
ಪಡುಬಿದ್ರಿ: ಪಲಿಮಾರು ಮಠದ ಶ್ರೀ ಯೋಗವಿದ್ಯಾಪೀಠದ ಘಟಿಕೋತ್ಸವ ಸಂದರ್ಭದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಈ ಬಾರಿಯ ಯಕ್ಷ ವಿದ್ಯಾಮಾನ್ಯ ಪ್ರಶಸ್ತಿಯನ್ನು ತೆಂಕುತಿಟ್ಟಿನ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಅವರಿಗೆ ಪ್ರದಾನ ಮಾಡಿದರು.
ಹಿರಿಯ ವಿದ್ವಾಂಸ ಪಂಜ ಭಾಸ್ಕರ ಭಟ್ ಅಭಿನಂದನ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಮತ್ತು ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿದ್ದರು.
50 ಸಾವಿರ ರೂ. ನಿಧಿಯನ್ನೊಳಗೊಂಡ ಈ ಪ್ರಶಸ್ತಿಯನ್ನು ಪಲಿಮಾರು ಮಠಾಧೀಶರು ಹಿರಿಯ ಯಕ್ಷಗಾನ ಕಲಾವಿದರಿಗೆ ನೀಡುವ ಪರಂಪರೆಯನ್ನು ಕಳೆದ ಒಂದು ದಶಕದಿಂದ ಮುಂದುವರಿಸಿಕೊಂಡು ಬಂದಿದ್ದಾರೆ.
ಇದೇ ಸಂದರ್ಭದಲ್ಲಿ ಹಿರಿಯ ಪಾಕತಜ್ಞ ಕೆ. ಶ್ರೀಧರ ಭಟ್, ವೈದಿಕ ವಿದ್ವಾನ್ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಅವರಿಗೆ ಶ್ರೀ ಮಠದ ಪ್ರಶಸ್ತಿ ನೀಡಿ ಗೌರವಿಸಿದರು.