-->
ಮೇ 20ರಂದು ದೇಶವ್ಯಾಪಿ ಮುಷ್ಕರ

ಮೇ 20ರಂದು ದೇಶವ್ಯಾಪಿ ಮುಷ್ಕರ

ಲೋಕಬಂಧು ನ್ಯೂಸ್
ಉಡುಪಿ: ಸಂಘಟಿತ - ಅಸಂಘಟಿತ ವಲಯದ ಕಾರ್ಮಿಕರ ಪರಿಸ್ಥಿತಿ, ಸಮಸ್ಯೆ, ಅದಕ್ಕೆ ಕಾರಣವಾಗಿರುವ ಸರ್ಕಾರದ ನೀತಿಗಳನ್ನು ಜನತೆಯ ಮುಂದಿರಿಸಲು ಮತ್ತು ಸಮಾಜಕ್ಕೆ ಅನ್ನದಾತ ರೈತರು ಮತ್ತು ಕಾರ್ಮಿಕ ರಂಗದ ಸಮಸ್ಯೆಗಳಿಗೆ ಕಾರಣವಾಗಿರುವವ ನೀತಿಗಳನ್ನು ಬದಲಿಸುವಂತೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಸಮಿತಿ ವತಿಯಿಂದಲೂ ಮುಷ್ಕರ ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ನಡೆಯಲಿದೆ.


ಬ್ಯಾಂಕ್, ಎಲ್ಐಸಿ, ಅಂಚೆ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಹಳೆ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಆರಂಭಗೊಂಡು, ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗ ಕೊನೆಗೊಳ್ಳಲಿದೆ. ನಂತರ ಸಭೆ ನಡೆಯಲಿದೆ.


ಕುಂದಾಪುರದ ಶಾಸ್ತ್ರಿ ವೃತ್ತದಿಂದ ಆರಂಭಗೊಂಡು, ಬಸ್ ನಿಲ್ದಾಣ ವರೆಗೆ ಸಾಗಿ, ಶಾಸ್ತ್ರಿ ಸರ್ಕಲ್ ಗೆ ವಾಪಾಸಾಗಿ ಸಭೆ ನಡೆಯಲಿದೆ ಎಂದರು.


ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಮೇ 17ರಂದು ಉಡುಪಿ, ಕುಂದಾಪುರ, ಬೈಂದೂರು ಭಾಗಗಳಲ್ಲಿ ಪಾದಯಾತ್ರೆ ಮೂಲಕ ಕರಪತ್ರ ಹಂಚಲಿದ್ದೇವೆ ಎಂದರು.


ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್, ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಶೇಖರ್ ಬಂಗೇರ, ಕವಿರಾಜ್.ಎಸ್. ಕೋಟ್ಯಾನ್ ಇದ್ದರು.

Ads on article

Advertise in articles 1

advertising articles 2

Advertise under the article