-->
ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್‌ ಆದೇಶ ರದ್ದುಗೊಳಿಸಿದ ಕೋರ್ಟ್

ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್‌ ಆದೇಶ ರದ್ದುಗೊಳಿಸಿದ ಕೋರ್ಟ್

ಲೋಕಬಂಧು ನ್ಯೂಸ್, ಬೆಂಗಳೂರು
ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಸಂಘಟನೆಗಳ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು 2024ರ ಅ.10ರಂದು ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್‌ ಭಾರದ್ವಾಜ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.


ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಗುರುವಾರ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಂಭವಾಗಿದೆ.

Ads on article

Advertise in articles 1

advertising articles 2

Advertise under the article