ಅಕ್ಟೋಬರ್‌ನಲ್ಲಿ 'ಅಂಗನವಾಡಿ ಸುವರ್ಣ ಮಹೋತ್ಸವ'
Monday, May 12, 2025
ಲೋಕಬಂಧು ನ್ಯೂಸ್
ಬೆಂಗಳೂರು: ಮುಂಬರುವ ಅಕ್ಟೋಬರ್ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ.
ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ ಸೇರಿಕೊಂಡು 1 ಲಕ್ಷ ಜನರ ಸಮ್ಮುಖದಲ್ಲಿ ಕಾರ್ಯಕ್ರಮ ಆಯೋಜಿಸುವ ಕನಸಿದೆ ಎಂದರು.