-->
ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಹಿಂದುತ್ವ ದಮನಕ್ಕೆ ಬಳಕೆ

ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಹಿಂದುತ್ವ ದಮನಕ್ಕೆ ಬಳಕೆ

ಲೋಕಬಂಧು ನ್ಯೂಸ್
ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜೊತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಮುಸ್ಲಿಂ ಮುಖಂಡರ ಜೊತೆಗೆ ಸಭೆ‌ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು ಡಾ. ಪರಮೇಶ್ವರ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುವುದಕ್ಕೂ ಮುನ್ನ ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರ್ಕಾರಕ್ಕೆ ಧಮ್ಕಿ ಹಾಕಿದ್ದಾರೆ. ಸರ್ಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಅವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆಯನ್ನು ಕರಾವಳಿಯ ಜೆಹಾದಿಗಳ‌‌‌ ಕಾಲ ಬುಡದಲ್ಲಿ ಅಡವಿಡುತ್ತೀರಾ ಎಂದು ಸುನಿಲ್ ಪ್ರಶ್ನಿಸಿದ್ದಾರೆ.


ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆ ಮಾಡುವುದರ ಉದ್ದೇಶ ಸ್ಪಷ್ಟವಾಗಿದೆ. ಹಿಂದುತ್ವದ ಪರವಾಗಿರುವ ಧ್ವನಿಯನ್ನು ಪೊಲೀಸ್ ಬಲ ಬಳಸಿ ದಮನಿಸುವುದು ಸರ್ಕಾರದ ಉದ್ದೇಶವಾಗಿದೆ. ಸರ್ಕಾರಕ್ಕೆ ಶಾಂತಿಯ ಬದಲು ಪಿಎಫ್ಐ ಉಗ್ರರ ಹಿತಾಸಕ್ತಿ ರಕ್ಷಣೆ ಮಾಡುವುದೇ ಆದ್ಯತೆಯಾಗಿದೆ ಎಂದವರು ಟೀಕಿಸಿದ್ದಾರೆ.


ಪ್ರತಿಕಾರವಲ್ಲವೇ?
ನಿನ್ನೆಯಷ್ಟೇ ಸ್ಪೀಕರ್ ಯು.ಟಿ.ಖಾದರ್ ಅವರು ಫಾಜಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದರು. ಆದರೆ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಫಾಜಿಲ್ ಸೋದರನೇ ಈ ಕೊಲೆಗೆ ಐದು ಲಕ್ಷ ರೂ. ಸುಪಾರಿ ನೀಡಿದ್ದಾನೆ ಎಂದು ಹೇಳಿದ್ದಾರೆ. ಹಾಗಾದರೆ ಯಾವುದು ಸತ್ಯ? ಫಾಜಿಲ್ ಸೋದರ ಸುಪಾರಿ ಕೊಟ್ಟಿದ್ದೇ ನಿಜವಾದರೆ ಸ್ಪೀಕರ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸುನಿಲ್ ಕುಮಾರ್  ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article