
ಬಜೆ ಅಣೆಕಟ್ಟು ನೀರಿನ ಮಟ್ಟ ಪರಿಶೀಲನೆ
Friday, May 16, 2025
ಲೋಕಬಂಧು ನ್ಯೂಸ್, ಉಡುಪಿ
ನಗರಸಭೆಗೆ ಕುಡಿಯುವ ನೀರು ಪೂರೈಸುವ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಶುಕ್ರವಾರ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ನಗರದ ನೀರು ಸರಬರಾಜಿಗೆ ಈ ಬಾರಿ ಯಾವುದೇ ಸಮಸ್ಯೆಯಾಗುವುದಿಲ್ಲ. ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ 25 ಎಂ.ಎಲ್.ಡಿ. ನೀರು ಸರಬರಾಜಾಗುತ್ತಿರುವುದರಿಂದ ರೇಶನಿಂಗ್ ಮಾಡುವ ಅನಿವಾರ್ಯತೆ ಇಲ್ಲ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಹೇಶ್, ನಗರಸಭಾ ಸದಸ್ಯರಾದ ಟಿ. ಜಿ. ಹೆಗ್ಡೆ, ಹರೀಶ್ ಶೆಟ್ಟಿ ಮತ್ತು ಗಿರಿಧರ ಆಚಾರ್ಯ, ಸಹಾಯಕ ಅಭಿಯಂತರ ಚೇತನ್, ವಾರಾಹಿ ಯೋಜನೆಯ ಆರ್ಕೇಶ್ ಮೊದಲಾದವರಿದ್ದರು.