ಪಿಓಕೆ ಜನ ಸ್ವಇಚ್ಛೆಯಿಂದ ಭಾರತಕ್ಕೆ ಮರಳುವ ದಿನ ದೂರವಿಲ್ಲ
Thursday, May 29, 2025
ಲೋಕಬಂಧು ನ್ಯೂಸ್, ನವದೆಹಲಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಓಕೆ)ದ ಜನ ಭಾರತದ ಭಾಗವಾಗಿದ್ದು, ಅವರು ಸ್ವಇಚ್ಛೆಯಿಂದ ಭಾರತಕ್ಕೆ ಮರಳುವ ದಿನ ದೂರವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಸಿ2ಬಿಸಿನೆಸ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಿಓಕೆ ಜನ ಭಾರತದೊಂದಿಗೆ ಆಳವಾದ ಸಂಪರ್ಕ ಹೊಂದಿದ್ದಾರೆ. ಭೌಗೋಳಿಕ ಮತ್ತು ರಾಜಕೀಯವಾಗಿ ಪ್ರತ್ಯೇಕವಾಗಿದ್ದರೂ ಅವರು ಒಂದು ದಿನ ಸ್ವಾಭಿಮಾನ ಮತ್ತು ಸ್ವಿಚ್ಛೆಯಿಙದ ಭಾರತಕ್ಕೆ ಮರಳುತ್ತಾರೆ ಎಂಬ ವಿಶ್ವಾಸವಿದೆ.
ಅಲ್ಲಿನ ಹೆಚ್ಚಿನ ಜನರು ಭಾರತದೊಂದಿಗೆ ಸಂಪರ್ಕ ಹೊಂದಿದ್ದಾರೆ, ದಾರಿ ತಪ್ಪಿದ ಕೆಲವೇ ಜನರು ಅಲ್ಲಿದ್ದಾರೆ ಎಂದರು.