ಭಾರಿ ಮಳೆ: ಮೇ 30ರಂದು ಉಡುಪಿ, ದ.ಕ. ಶಾಲೆಗಳಿಗೆ ರಜೆ
Friday, May 30, 2025
ಲೋಕಬಂಧು ನ್ಯೂಸ್, ಉಡುಪಿ
ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ 1ರಿಂದ 10ನೇ ತರಗತಿ ವರೆಗೆ ಮೇ 30ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಘೋಷಿಸಿದ್ದಾರೆ.ಆದರೆ, ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿರುವುದರಿಂದ ಅಲ್ಲಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.