-->
ಐಪಿಎಸ್ ಅಧಿಕಾರಿಗಳ ವರ್ಗ

ಐಪಿಎಸ್ ಅಧಿಕಾರಿಗಳ ವರ್ಗ

ಲೋಕಬಂಧು ನ್ಯೂಸ್, ಬೆಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳೊಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ, ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿ.ಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್.ಪಿ. ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮಂಗಳೂರಿನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್.ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್‌ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article