-->
ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಲೋಕಬಂಧು ನ್ಯೂಸ್
ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಭಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.
2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ. 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ. 90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ. 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.


ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ 8147454906ನ್ನು ಸಂಪರ್ಕಿಸಬಹುದು.

Ads on article

Advertise in articles 1

advertising articles 2

Advertise under the article