
ಮಹಿಳಾ ಉತ್ಪನ್ನಗಳ ಬಿಡುಗಡೆ
Tuesday, May 13, 2025
ಲೋಕಬಂಧು ನ್ಯೂಸ್
ಉಡುಪಿ: ಜಿಲ್ಲೆಯ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸುವ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ದೊರಕುವಂತಾಗಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ಅಮಾಸೆಬೈಲು ಗ್ರಾಮದ ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಮೊದಲ ಹಂತದಲ್ಲಿ ಆಯ್ದ 25ರಿಂದ 30 ಉತ್ಪನ್ನಗಳನ್ನು ಮಾತ್ರ ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಎಲ್ಲಾ ಉತ್ಪನ್ನಗಳನ್ನು ಉಡುಪಿ ಸಂಜೀವಿನಿ ಬ್ರಾಂಡ್ ನಡಿ ತರಲಾಗುವುದು ಎಂದರು.
ಮಹಿಳೆಯರು ತಯಾರಿಸಿದ ಅಪ್ಪೆಮಿಡಿ ಉಪ್ಪಿನಕಾಯಿ ಹಾಗೂ ಹಳ್ಳಿಹೊಳೆ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಕೃತಕ ಆಭರಣಗಳನ್ನು ಬಿಡುಗಡೆ ಮಾಡಲಾಯಿತು.
ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಇದ್ದರು.