-->
ಪಿಕಪ್ ಚಾಲಕನ ಕಡಿದು ಕೊಲೆ

ಪಿಕಪ್ ಚಾಲಕನ ಕಡಿದು ಕೊಲೆ

ಲೋಕಬಂಧು ನ್ಯೂಸ್, ಬಂಟ್ವಾಳ
ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಮಂಗಳವಾರ ಇಲ್ಲಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ನಡೆದಿದೆ.
ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಕೊಲೆಗೀಡಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.ಆತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.


 ರಹೀಮ್ ಜೊತೆ ಆತನ ಸಹಾಯಕ ಶಾಫಿ ಕೂಡಾ ಇದ್ದು ಆತನ ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article