-->
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಪ್ರತಿಭಟನೆ

ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಪ್ರತಿಭಟನೆ

ಲೋಕಬಂಧು ನ್ಯೂಸ್
ಉಡುಪಿ: ದ.ಕ ಜಿಲ್ಲೆಯ ಬಜ್ಪೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದೊದಗಿದೆ.


ಸುಹಾಸ್ ಶೆಟ್ಟಿ ಹತ್ಯೆಯಿಂದ ಬಹಳ ನೋವಾಗಿದೆ. ಹಿಂದೂ ಕಾರ್ಯಕರ್ತರಿಗೆ ಸರಿಗೆ ಮೇಲಿನ ನಡಿಗೆ ಸ್ಥಿತಿ ಉಂಟಾಗಿದೆ. ಮತ ಬ್ಯಾಂಕ್ ರಾಜಕಾರಣ, ಮುಸ್ಲಿಂ ಒಲೈಕೆಯಿಂದಾಗಿ ಈ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದರು.


ಹಣಕಾಸಿನ ವ್ಯವಹಾರ ಇಲ್ಲ, ಹಿಂದೂ ಕಾರ್ಯಕರ್ತನಾಗಿದ್ದ ಎಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲಿ ಯಾರ ಭಯವೂ ಇಲ್ಲದೇ ಕೊಲೆ ಮಾಡಿದ್ದಾರೆ. ಪೋಲಿಸ್ ಇಲಾಖೆ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದರು.


ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಯುವಮೋರ್ಚಾ ಅಧ್ಯಕ್ಷ ಪೃಥ್ವಿ, ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article