
ರಾಜಾ ಎಸ್. ಗಿರಿ ಆಚಾರ್ಯಗೆ ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿ ಪ್ರದಾನ
Saturday, May 3, 2025
ಲೋಕಬಂಧು ನ್ಯೂಸ್
ಉಡುಪಿ: ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಯ ಹರಿಕಾರ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ವಿದ್ವಾಂಸ ರಾಜಾ ಎಸ್. ಗಿರಿ ಆಚಾರ್ಯ ಅವರಿಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
ರಾಷ್ಟ್ರವ್ಯಾಪಿ ಸ್ಥಾಪಿತವಾಗಿರುವ ಶ್ರೀ ರಾಘವೇಂದ್ರ ಮಠದ ಪ್ರಧಾನ ಅಧಿಕಾರಿಯಾಗಿ ಹಾಗೂ ವಿದ್ವಾಂಸರ ಪೋಷಣೆ, ಗ್ರಂಥ ಸಂರಕ್ಷಣೆ- ಸಂಶೋಧಕರಾಗಿ ಪಂ. ಗಿರಿ ಆಚಾರ್ಯ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.
ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.