-->
ರೆಡ್ ಕ್ರಾಸ್ ಶಿಬಿರ ವ್ಯಕ್ತಿತ್ವ ವಿಕಸನಕ್ಕೆ ಪೂರಕ

ರೆಡ್ ಕ್ರಾಸ್ ಶಿಬಿರ ವ್ಯಕ್ತಿತ್ವ ವಿಕಸನಕ್ಕೆ ಪೂರಕ

ಲೋಕಬಂಧು ನ್ಯೂಸ್, ಉಡುಪಿ
ಶಿಕ್ಷಣದ ಉದ್ದೇಶ ಕೇವಲ ಜ್ಞಾನಾರ್ಜನೆ ಮಾತ್ರ ಅಲ್ಲ. ಅದು ವ್ಯಕ್ತಿಯ ಶಕ್ತಿಯನ್ನು ಹೊರತೆಗೆದು ವ್ಯಕ್ತಿತ್ವವನ್ನು ರೂಪಿಸಬೇಕು. ಅದರಲ್ಲಿ ಪಠ್ಯ ಪೂರಕ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ರೆಡ್ ಕ್ರಾಸ್ ಶಿಬಿರಗಳು ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ಎಂದು ರಾಜ್ಯ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.
ನಗರದ ರೆಡ್ ಕ್ರಾಸ್ ಭವನದಲ್ಲಿ ಕಾರ್ಕಳ ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಮೂರು ದಿನಗಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಮಾತನಾಡಿದರು.


ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ಶಿಬಿರ ವಿದ್ಯಾರ್ಥಿಗಳಿಗೆ ಕೌಶಲ್ಯದ ತರಬೇತಿ ನೀಡುತ್ತದೆ ಎಂದರು.


ರೆಡ್ ಕ್ರಾಸ್ ಖಜಾಂಚಿ ರಮಾದೇವಿ, ವಿಕಲಚೇತನರ ಪುನರ್ವಸತಿ ಕೇಂದ್ರದ ಅಡಿಯಾಲಜಿಸ್ಟ್ ನೆಲಿಶಾ ಮೆರಿಲ್ ಜತ್ತನ್ನ, ಕಾಲೇಜಿನ ರೆಡ್ ಕ್ರಾಸ್ ಘಟಕದ ನಾಯಕಿ ನವ್ಯಾ ಹೆಗ್ಡೆ ಮೊದಲಾದವರಿದ್ದರು.


ಕಾಲೇಜಿನ ರೆಡ್ ಕ್ರಾಸ್ ಸಂಯೋಜಕಿ ಡಾ. ವಿದ್ಯಾ ಪ್ರಭು ಸ್ವಾಗತಿಸಿ, ಸ್ನೇಹ ನಿರ್ವಹಿಸಿದರು. ದಿವ್ಯಾ ದೇವಾಡಿಗ ವಂದಿಸಿದರು.

Ads on article

Advertise in articles 1

advertising articles 2

Advertise under the article