ಎಸ್ಎಸ್ಎಲ್.ಸಿ ಫಲಿತಾಂಶ: ದ.ಕ. ಪ್ರಥಮ; ಉಡುಪಿ ದ್ವಿತೀಯ
Friday, May 2, 2025
ಲೋಕಬಂಧು ನ್ಯೂಸ್
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) 2024-25ನೇ ಸಾಲಿನ ಎಸ್ಎಸ್ಎಲ್. ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿವೆ. ಈ ವರ್ಷ ಶೇ. 56.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.ಮಾರ್ಚ್ 21 ದಿಂದ ಏಪ್ರಿಲ್ 4ರ ವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,854 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.
ಇಲ್ಲಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲಾಖೆಯ ಹಿರಿಯ ಅಧಿಕಾರಿಗಳ ನಮ್ಮುಖದಲ್ಲಿ ಎಸ್ಎಸ್ಎಲ್. ಸಿ ಫಲಿತಾಂಶ ಪ್ರಕಟಿಸಿದರು. ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶ ವೀಕ್ಷಿಸಬಹುದು.
ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.