
ಎಸ್.ಎಸ್.ಎಲ್.ಸಿ. ಫಲಿತಾಂಶ: ಶಾಸಕ ಅಭಿನಂದನೆ
Friday, May 2, 2025
ಲೋಕಬಂಧು ನ್ಯೂಸ್
ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12 ಮತ್ತು ಉಡುಪಿ ಜಿಲ್ಲೆ ಶೇ. 89.96 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಸಾಬೀತಾಗಿದೆ.
ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.