
ಯಶಸ್ವಿ ಸಾಹಿತ್ಯ ಸಮ್ಮೇಳನ: ಕಸಾಪ ಅಭಿನಂದನೆ
Tuesday, May 27, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಈಚೆಗೆ ಕೃಷ್ಣಮಠ ರಾಜಾಂಗಣದಲ್ಲಿ ಉಡುಪಿ ಜಿಲ್ಲಾ 17ನೇ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಕಸಾಪ ವತಿಯಿಂದ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಗೌರವಿಸಿದರು.
ವಿಶ್ವ ಗೀತಾ ಪರ್ಯಾಯ ಸಂದರ್ಭದಲ್ಲಿ ನಡೆದ ಸಾಹಿತ್ಯ ಸಮ್ಮೇಳನ ಯಶಸ್ಸು ಕಂಡು ಸಂತಸವಾಯಿತು. ಮುಂದಿನ ದಿನಗಳಲ್ಲೂ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶ್ರೀಗಳು ಹಾರೈಸಿದರು.
ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ವಂದಿಸಿದರು.
ಕಾಪು ಕಸಾಪ ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಸಂಘಟನಾ ಕಾರ್ಯದರ್ಶಿ ಸತೀಶ ವಡ್ಡರ್ಸೆ, ಸಹ ಕಾರ್ಯದರ್ಶಿ ಡಾ. ರಘು ನಾಯ್ಕ್, ಕಸಾಪ ಮಾಧ್ಯಮ ಪ್ರತಿನಿಧಿ ನರಸಿಂಹಮೂರ್ತಿ ರಾವ್ ಮಣಿಪಾಲ, ಕಸಾಪ ಪದಾಧಿಕಾರಿಗಳಾದ ಸೂರಾಲು ನಾರಾಯಣ ಮಡಿ, ರಮೇಶ್ ಭಟ್ ರಮಣ ಆಚಾರ್ಯ, ನಾಗರಾಜ ಆಚಾರ್ಯ ಮಡಿ, ವಿಶ್ವನಾಥ ಖಾರ್ವಿ ಉಪಸ್ಥಿತರಿದ್ದರು.