ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ
Wednesday, May 28, 2025
ಲೋಕಬಂಧು ನ್ಯೂಸ್, ಬೆಂಗಳೂರು
ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ದ್ವೇಷದ ಕೊಲೆಗೆ ಸೂಕ್ತ ಕ್ರಮ ಕೈಗೊಂಡು ಕೊಲೆಯ ಹಿಂದಿರುವ ದುಷ್ಟ ಶಕ್ತಿಗಳನ್ನು ಪತ್ತೆ ಹಚ್ಚುವಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.ಅಬ್ದುಲ್ ರಹಿಮಾನ್'ನನ್ನು ಕೊಲೆ ಮಾಡಿದ ಶಕ್ತಿಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡು ದ್ವೇಷ ಭಾಷಣ ಮತ್ತು ಪ್ರಚೋದನೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಪೊಲೀಸ್ ಇಲಾಖೆಯ ವೈಫಲ್ಯವೂ ಇದಕ್ಕೆ ಕಾರಣವಾಗಿರುವುದಾಗಿ ಜನಾಭಿಪ್ರಾಯಾಗಿದ್ದು, ಈ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯನ್ನು ಐವನ್ ಆಗ್ರಹಿಸಿದ್ದಾರೆ.