-->
ಬಿಜೆಪಿಯ ಈರ್ವರು ಶಾಸಕರ ಉಚ್ಚಾಟನೆ

ಬಿಜೆಪಿಯ ಈರ್ವರು ಶಾಸಕರ ಉಚ್ಚಾಟನೆ

ಲೋಕಬಂಧು ನ್ಯೂಸ್, ಬೆಂಗಳೂರು
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಉಚ್ಛಾಟಿಸಲಾಗಿದೆ.ಪಕ್ಷದ ಹೈಕಮಾಂಡ್‌ ಉಚ್ಛಾಟನೆ ನೋಟೀಸ್‌ ಕಳುಹಿಸಿದ್ದು, ಇಬ್ಬರೂ ಶಾಸಕರನ್ನು 6 ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.


ಈ ತಿಂಗಳ ಆರಂಭದಲ್ಲಿ ಈ ಕುರಿತು ಮಾತನಾಡಿದ್ದ ಪಕ್ಷದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದಿದ್ದರು.


ವಿಧಾನಸಭೆ ಚುನಾವಣೆ ನಂತರ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಅವರಿಬ್ಬರ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ವಿಜಯೇಂದ್ರ ಹೇಳಿದ್ದರು.

Ads on article

Advertise in articles 1

advertising articles 2

Advertise under the article