-->
ಪ್ರಚೋದನಕಾರಿ ಭಾಷಣ: ಡಾ.ಕಲ್ಲಡ್ಕ ಸಹಿತ 15 ಮಂದಿ ವಿರುದ್ಧ ಕೇಸು

ಪ್ರಚೋದನಕಾರಿ ಭಾಷಣ: ಡಾ.ಕಲ್ಲಡ್ಕ ಸಹಿತ 15 ಮಂದಿ ವಿರುದ್ಧ ಕೇಸು

ಲೋಕಬಂಧು ನ್ಯೂಸ್, ಬಂಟ್ವಾಳ
ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್​ಎಸ್​ಎಸ್​​​ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಎಫ್ಐಆರ್ ದಾಖಲಾಗಿದೆ.
ಇತ್ತಿಚೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಪ್ರಚೋದನಕಾರಿ ಭಾಷಣ ಮಾಡುವವರನ್ನು ಮಟ್ಟ ಹಾಕುವುದಾಗಿ ತಿಳಿಸಿದ್ದರು.


ಇದೀಗ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15 ಜನ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.


ಮೇ 12ರಂದು ಕಾವಳಪಡೂರು ಗ್ರಾಮದ ಪ್ಯಾಲೇಸ್ ಹಾಲ್​ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಆ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ. ಹಾಗಾಗಿ ಎಫ್​ಐಆರ್ ದಾಖಲಾಗಿದೆ.


ಪ್ರಮೋದ್ ರೈ ನಂದುಗುರಿ, ತಿಲಕ್​ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್​ ನೂಜಿಬಾಳ್ತಿಲ, ರಾಧಾಕೃಷ್ಣ. ಕೆ, ಜಯಂತ್​ ಮತ್ತು ಮೂವರ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article