-->
ಪ್ರತೀ ಶಾಲೆಯಲ್ಲಿ ಪರಿಸರ ಕ್ಲಬ್

ಪ್ರತೀ ಶಾಲೆಯಲ್ಲಿ ಪರಿಸರ ಕ್ಲಬ್

ಲೋಕಬಂಧು ನ್ಯೂಸ್, ಬೆಂಗಳೂರು
ಹಸಿರು ಪರಿಸರ ಬೆಂಗಳೂರಿನ ಆಸ್ತಿ. ಈ ಗಾರ್ಡನ್ ಸಿಟಿಯ ಹೆಸರನ್ನು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು. ಅದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗೋಣ, ಹಸಿರ ಹಾದಿಯಲ್ಲಿ ನಡೆಯೋಣ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪರಿಸರ ನಡಿಗೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.ಹೆಸರಾಗಲಿ ಹಸಿರು, ಉಸಿರಾಗಲಿ ಪರಿಸರ, ಪರಿಸರ ನಮ್ಮ ಮನೆ. ಅದನ್ನು ರಕ್ಷಣೆ ಮಾಡಬೇಕಾದುದು ನಮ್ಮ ಆದ್ಯ ಕರ್ತವ್ಯ.


ಪರಿಸರ ಸಂರಕ್ಷಣೆ ದೇಶದ ರಕ್ಷಣೆ ಇದ್ದಂತೆ. ಹಸಿರೇ ಉಸಿರು ಎಂದು ತಿಳಿದು ಮಾರಕ ಪ್ಲಾಸ್ಟಿಕ್ ನಿರ್ಮೂಲನೆ ಮಾಡಬೇಕಾದುದು ನಮ್ಮ- ನಿಮ್ಮೆಲ್ಲರ ಜವಾಬ್ದಾರಿ.


ಅದಕ್ಕಾಗಿ ಈಗಾಗಲೇ ಶಾಲೆಗಳಲ್ಲಿ ಕಡ್ಡಾಯವಾಗಿ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಹವಾಮಾನ ಕ್ರಿಯಾ ಬಳಗ ಮತ್ತು ಪರಿಸರ ಸಂಘಗಳನ್ನು ರಚಿಸಲು ಆದೇಶ ನೀಡಿದ್ದೇನೆ. ಒಂದೊಂದು ಶಾಲೆ ಒಂದೊಂದು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು, ಒಬ್ಬೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡ ನೆಟ್ಟು ಪೋಷಿಸಬೇಕು ಎಂದರು.

Ads on article

Advertise in articles 1

advertising articles 2

Advertise under the article