-->
ಮಾಜಿ ಶಾಸಕ ಕಾಕಾ ಸಾಹೇಬ್ ನಿಧನ

ಮಾಜಿ ಶಾಸಕ ಕಾಕಾ ಸಾಹೇಬ್ ನಿಧನ

ಲೋಕಬಂಧು ನ್ಯೂಸ್, ಬೆಳಗಾವಿ
ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್​ ನಾಯಕ ಹಾಗೂ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಬುಧವಾರ ಇಲ್ಲಿನ ಕೆಎಲ್​ಇ ಆಸ್ಪತ್ರೆಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾದರು.
ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾ ಸಾಹೇಬ್ ಪಾಟೀಲ್ ತನ್ನ 70ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ.


ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


1999ರಿಂದ 2013ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಿಪ್ಪಾಣಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.


ಸಜ್ಜನ ರಾಜಕಾರಣಿ ಕಾಕಾ ಸಾಹೇಬ್‌ ಪಾಟೀಲ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ads on article

Advertise in articles 1

advertising articles 2

Advertise under the article