ಹಿಂದೂ ಮುಖಂಡ ಅರುಣ್ ಪುತ್ತಿಲ ಗಡಿಪಾರಿಗೆ ನಿರ್ಧಾರ
Monday, June 2, 2025
ಲೋಕಬಂಧು ನ್ಯೂಸ್, ಪುತ್ತೂರು
ಹಿಂದೂ ಮುಖಂಡ ಹಾಗೂ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪುತ್ತಿಲ ಅವರಿಗೆ ನೋಟಿಸ್ ನೀಡಲಾಗಿದೆ.
ಜೂ.6ರಂದು ಖುದ್ದು ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಬಹುದು. ತಪ್ಪಿದ್ದಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುವುದಾಗಿ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರು ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.