ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
Saturday, June 21, 2025
ಲೋಕಬಂಧು ನ್ಯೂಸ್, ಉಡುಪಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಮಣಿಪಾಲ ರಜತಾದ್ರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದರು.ಇದೇ ಸಂದರ್ಭದಲ್ಲಿ ಗ್ರಾಮಲೆಕ್ಕಿಗರಿಗೆ ಲ್ಯಾಪ್‌ಟಾಪ್ ನೀಡಿದರು.ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಮೊದಲಾದವರಿದ್ದರು.