-->
ತಾಯಿಯನ್ನು ಕೊಂದು ಸುಟ್ಟು ನೆರೆಮನೆಯಾಕೆಗೂ ಬೆಂಕಿ ಹಚ್ಚಿದ ಭೂಪ!

ತಾಯಿಯನ್ನು ಕೊಂದು ಸುಟ್ಟು ನೆರೆಮನೆಯಾಕೆಗೂ ಬೆಂಕಿ ಹಚ್ಚಿದ ಭೂಪ!

ಲೋಕಬಂಧು ನ್ಯೂಸ್, ಮಂಜೇಶ್ವರ
ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ ಆಕೆಗೂ ಬೆಂಕಿ ಹಚ್ಚಿದ ಘಟನೆ ನಡೆದಿದ್ದು ತಾಯಿ ಸಾವನ್ನಪ್ಪಿದ್ದಾರೆ. ನೆರೆಮನೆಯ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವರ್ಕಾಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್ ಮೊಂತೆರೋ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ. ಪುತ್ರ ಮೆಲ್ವಿನ್ ಈ ಕೃತ್ಯ ಎಸಗಿದ ಧೂರ್ತ!


ನೆರೆಮನೆಯ ವಿಕ್ಟರ್ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಜೂನ್ 26ರ ಮುಂಜಾನೆ ಈ ಘಟನೆ ನಡೆದಿದ್ದು, ಪುತ್ರ ಮೆಲ್ವಿನ್ ಮೊಂತೆರೋ (33) ಈ ಕೃತ್ಯವೆಸಗಿ ಪರಾರಿಯಾಗಿದ್ದಾನೆ.


ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆದ ಬಳಿಕ ಆಕೆಗೂ ಬೆಂಕಿ ಹಚ್ಚಿದ್ದಾನೆ.


ತಾಯಿ ಮೃತ ದೇಹ ಮನೆಯ ಹಿಂಭಾಗದ ಪೊದರುಗಳ ಎಡೆಯಲ್ಲಿ ದೊರೆತಿದೆ. ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರವೇ ವಾಸಿಸುತ್ತಿದ್ದು, ಇನ್ನೋರ್ವ ಮಗ ಅಲ್ವಿನ್ ಮೊಂತೆರೊ ಕೊಲ್ಲಿ ರಾಷ್ಟ್ರದಲ್ಲಿದ್ದಾನೆ. ಆರೋಪಿ ಮೆಲ್ವಿನ್ ಕಟ್ಟಡ ಕಾರ್ಮಿಕನಾಗಿದ್ದಾನೆ.

Ads on article

Advertise in articles 1

advertising articles 2

Advertise under the article