-->
ಪ್ಯಾರಸಿಟಮೋಲ್ ಸಹಿತ ಹಲವು ಔಷಧಿಗಳು ಬ್ಯಾನ್

ಪ್ಯಾರಸಿಟಮೋಲ್ ಸಹಿತ ಹಲವು ಔಷಧಿಗಳು ಬ್ಯಾನ್

ಲೋಕಬಂಧು ನ್ಯೂಸ್, ಬೆಂಗಳೂರು
ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ.ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಕೆ ಮಾಡುವ ಪ್ಯಾರಾಸಿಟಮೋಲ್, ಮೈಸೂರು ಮೂಲದ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ ಹಲವು ಉತ್ಪನ್ನಗಳಿವೆ.ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.


ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಜಾಲತಾಣದಲ್ಲಿ ಪಟ್ಟಿ ಬಿಡುಗಡೆ ಮಾಡಿ ಪೋಸ್ಟ್‌ ಮಾಡಿದ್ದಾರೆ. ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯ ಕೆಲವು ಔಷಧಗಳು/ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್'ಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣ ನಿಲ್ಲಿಸಬೇಕೆಂದು ಮನವಿ ಮಾಡುತ್ತೇನೆ.


ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ಯಾವುದೇ ಸಂಗ್ರಹ ಇದ್ದರೆ ನಿಮ್ಮ ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣ ತಿಳಿಸಿ. ನಿಮ್ಮ ಸುರಕ್ಷತೆ ನಮ್ಮ ಆದ್ಯತೆ.


ದಯವಿಟ್ಟು ಪಟ್ಟಿ ಮಾಡಲಾದ ಬ್ಯಾಚ್‌ನ ಔಷಧಗಳು/ ಸೌಂದರ್ಯವರ್ಧಕಗಳನ್ನು ಬಳಸಬೇಡಿ.


ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article